Jeremiah 34:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾದ ಚಿದ್ಕೀಯನನ್ನೂ ಅವನ ನಾಯಕರುಗಳನ್ನೂ ನಾನು ಅವರ ಶತ್ರುಗಳಿಗೂ ಅವರನ್ನು ಕೊಲ್ಲಬಯಸುವ ಜನರಿಗೂ ಕೊಡುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮನ್ನು ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನ್ನು ಬಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.
Kannada Bible (KNCL) BSI 2016
ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.