Jeremiah 34:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
Kannada BSI Bible 2016
ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ.
Kannada Bible (KNCL) BSI 2016
ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.