Jeremiah 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನ್ನು ಕೇಳು. ಯೆಹೋವನು ನಿನ್ನ ಬಗ್ಗೆ ಹೀಗೆ ಹೇಳುತ್ತಾನೆ. ನಿನ್ನನ್ನು ಖಡ್ಗದಿಂದ ಕೊಲ್ಲಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
Kannada BSI Bible 2016
ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಕೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ - [ನೀನು ಕೇಳಿ ಕೈಕೊಂಡರೆ] ಖಡ್ಗದಿಂದ ಹತನಾಗುವದಿಲ್ಲ; ಸುಖವಾಗಿ ಸಾಯುವಿ;
Kannada Bible (KNCL) BSI 2016
ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.