Jeremiah 34:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನ್ನ ಆಳಿದ ನಿನ್ನ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನ್ನು ಹಾಕಿದ್ದರು. ಹಾಗೆಯೇ ನಿನ್ನನ್ನು ಗೌರವಿಸಲು ಜನರು ಶವಸಂಸ್ಕಾರದ ಧೂಪವನ್ನು ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸಬತಃ ನಾನೇ ನಿನಗೆ ಈ ವಾಗ್ದಾನವನ್ನು ಮಾಡುತ್ತಿದ್ದೇನೆ.”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
Kannada BSI Bible 2016
ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”