Jeremiah 35:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದ ದೇಶದ ಮೇಲೆ ಧಾಳಿ ಮಾಡಿದಾಗ ನಾವು ಜೆರುಸಲೇಮ್ ನಗರದಲ್ಲಿ ಪ್ರವೇಶ ಮಾಡಿ ಹೀಗೆ ಮಾತನಾಡಿಕೊಂಡೆವು, ‘ಬನ್ನಿ, ನಾವು ಬಾಬಿಲೋನಿನ ಸೈನ್ಯದಿಂದ ಮತ್ತು ಅರಾಮ್ಯರ ಸೈನ್ಯದಿಂದ ತಪ್ಪಿಸಿಕೊಳ್ಳುವದಕ್ಕಾಗಿ ಜೆರುಸಲೇಮ್ ನಗರವನ್ನು ಪ್ರವೇಶಿಸೋಣ.’ ಹೀಗಾಗಿ ನಾವು ಜೆರುಸಲೇಮ್ ನಗರದಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
Kannada BSI Bible 2016
ಶಾಫಾನನ ಮಗನಾದ ಗೆಮ ರ್ಯನ ಮಗನಾದ ವಿಾಕಾಯನು ಕರ್ತನ ವಾಕ್ಯಗಳ ನ್ನೆಲ್ಲಾ ಆ ಪುಸ್ತಕದ ಮೇರೆಗೆ ಕೇಳಿದ ತರುವಾಯ ಅವನು ಅರಸನ ಮನೆಗೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.
Kannada Bible (KNCL) BSI 2016
ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.