Jeremiah 35:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳಿದನು: ಯೆರೆಮೀಯನೇ, ಹೋಗಿ ಈ ಸಂದೇಶವನ್ನು ಯೆಹೂದದ ಮತ್ತು ಜೆರುಸಲೇಮಿನ ಜನರಿಗೆ ತಿಳಿಸು. ನೀವು ಇದರಿಂದ ಒಂದು ಪಾಠವನ್ನು ಕಲಿಯಙೇಕು ಮತ್ತು ನನ್ನ ಸಂದೇಶವನ್ನು ಅನುಸರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
Kannada BSI Bible 2016
ಆಗ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ ವಿಾಕಾ ಯನು ತಾನು ಕೇಳಿದ ವಾಕ್ಯಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.