Jeremiah 35:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೇಕಾಘನ ಮಗನಾದ ಯೋನಾದಾಘನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಙೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada BSI Bible 2016
ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada Bible (KNCL) BSI 2016
‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”