Jeremiah 35:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, ‘ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು’ ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಘಹುದು ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Kannada BSI Bible 2016
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Kannada Bible (KNCL) BSI 2016
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.