Jeremiah 35:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಙೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
Kannada BSI Bible 2016
ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”