Jeremiah 35:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೆರೆಮೀಯನು ರೇಕಾಘ್ಯರಿಗೆ ಹೀಗೆ ಹೇಳಿದನು, “ಸರ್ವಶಕ್ತನಾದ ಯೆಹೋವನು, ಇಸ್ರೇಲಿನ ದೇವರು ಹೀಗೆ ಹೇಳುತ್ತಾನೆ. ‘ನೀವು ನಿಮ್ಮ ಪೂರ್ವಿಕನಾದ ಯೋನಾದಾಘನ ಆಜ್ಞೆಗಳನ್ನು ಪಾಲಿಸಿದ್ದೀರಿ. ನೀವು ಯೋನಾದಾಘನ ಎಲ್ಲಾ ಉಪದೇಶಗಳನ್ನು ಅನುಸರಿಸಿದ್ದೀರಿ. ನೀವು ಅವನು ವಿಊಸಿದಂತೆ ಎಲ್ಲವನ್ನು ಮಾಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
Kannada BSI Bible 2016
ಆಗ ಬಾರೂಕನು ಅವರಿಗೆ--ಅವನು ಬಾಯಿಂದ ಈ ವಾಕ್ಯ ಗಳನ್ನೆಲ್ಲಾ ನನಗೆ ಹೇಳಿಕೊಟ್ಟನು; ನಾನು ಅವುಗಳನ್ನು ಮಸಿಯಿಂದ ಪುಸ್ತಕದಲ್ಲಿ ಬರೆದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯೆರೆಮೀಯನು ರೇಕಾಬ್ಯರಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ
Kannada Bible (KNCL) BSI 2016
ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ