Jeremiah 35:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನಂತರ ನಾನು ರೇಕಾಘ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಘವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.
Kannada BSI Bible 2016
ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ
Kannada Bible (KNCL) BSI 2016
ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,