Jeremiah 35:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಘಹಳ ಕಾಲದವರೆಗೆ ಇರಘಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.
Kannada BSI Bible 2016
ಒಂದು ವೇಳೆ ಅವರ ವಿಜ್ಞಾಪನೆ ಕರ್ತನ ಮುಂದೆ ಬಂದೀತು; ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು; ಕರ್ತನು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ ಉರಿಯೂ ಅಪಾರವಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಕಟ್ಟಬಾರದು, ಬೀಜ ಬಿತ್ತಬಾರದು, ತೋಟ ಮಾಡಬಾರದು, ಅನುಭವಿಸಲೂ ಬಾರದು; ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು; ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗುವದು ಎಂದು ಅಪ್ಪಣೆಕೊಟ್ಟಿದ್ದಾನೆ.
Kannada Bible (KNCL) BSI 2016
ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.