Jeremiah 35:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ರೇಕಾಘ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಘನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Kannada BSI Bible 2016
ಆಗ ಪ್ರವಾದಿ ಯಾದ ಯೆರೆವಿಾಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಬಾರೂಕನು ಮಾಡಿ ಕರ್ತನ ವಾಕ್ಯಗಳನ್ನು ಪುಸ್ತಕ ದಿಂದ ಕರ್ತನ ಆಲಯದಲ್ಲಿ ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲಾ ವಿಷಯದಲ್ಲಿಯೂ ಕೈಕೊಳ್ಳುತ್ತಿದ್ದೇವೆ; ನಾವಾಗಲಿ ನಮ್ಮ ಹೆಂಡರಾಗಲಿ ಗಂಡು ಹೆಣ್ಣು ಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವದಿಲ್ಲ;
Kannada Bible (KNCL) BSI 2016
ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ,