Jeremiah 36:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಅಊಕಾರಿಗಳೆಲ್ಲ ಯೆಹೂದಿ ಎಂಬುವನನ್ನು ಬಾರೂಕನಲ್ಲಿಗೆ ಕಳುಹಿಸಿಕೊಟ್ಟರು. ಯೆಹೂದಿಯು ಶೆಲೆಮ್ಯನ ಮಗನಾದ ನೆಥನ್ಯನ ಮಗ. ಶೆಲೆಮ್ಯನು ಕೂಷಿಯ ಮಗ. ಯೆಹೂದಿಯು ಬಾರೂಕನಿಗೆ, “ನೀನು ಓದಿದ ಸುರುಳಿಯನ್ನು ತೆಗೆದುಕೊಂಡು ನನ್ನ ಜೊತೆ ಬಾ” ಎಂದು ಕರೆದನು. ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ತೆಗೆದುಕೊಂಡು ಯೆಹೂದಿಯ ಸಂಗಡ ಆ ಅಊಕಾರಿಗಳ ಹತ್ತಿರಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
Kannada BSI Bible 2016
ಆದರೆ ಯೆರೆವಿಾಯನು ಹೇಳಿದ್ದೇನಂದರೆ--ಸುಳ್ಳು; ನಾನು ಕಸ್ದೀಯರ ಕಡೆಗೆ ಬೀಳುವವನಲ್ಲ ಅಂದನು. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆವಿಾ ಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲ ಪ್ರಧಾನರು ಬಾರೂಕನಿಗೆ - ನೀನು ಜನರ ಮುಂದೆ ಓದಿದ ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
Kannada Bible (KNCL) BSI 2016
ಅಧಿಕಾರಿಗಳೆಲ್ಲರು ಸೇರಿ, ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯನನ್ನು ಬಾರೂಕನ ಬಳಿಗೆ ಕಳಿಸಿದರು. ‘ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ’ ಎಂದು ಹೇಳಿ ಕಳಿಸಿದರು. ಅಂತೆಯೆ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.