Jeremiah 36:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಊಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
Kannada BSI Bible 2016
ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.
Kannada Bible (KNCL) BSI 2016
ಅವನು ಲೇಖಕ ಎಲೀಷಾಮನ ಕೊಠಡಿಯಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಎಲ್ಲ ರಾಜ್ಯಾಧಿಕಾರಿಗಳ ಮುಂದೆ ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.