Jeremiah 36:25 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲಾಐಥಾನನೂ ದೆಲಾಯನೂ ಗೆಮರ್ಯನೂ ಅದನ್ನು ಸುಡಬೇಡವೆಂದು ರಾಜನಿಗೆ ಹೇಳುವ ಪ್ರಯತಐ ಮಾಡಿದರು. ಆದರೆ ರಾಜನು ಅವರ ಮಾತನ್ನು ಕೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ನಾಥಾನನೂ ದೆಲಾಯನೂ ಗೆಮರ್ಯನೂ - ದಯಮಾಡಿ ಸುರಳಿಯನ್ನು ಸುಡಬಾರದೆಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.
Kannada Bible (KNCL) BSI 2016
ಎಲ್ನಾಥಾನನು, ದೆಲಾಯನು ಹಾಗೂ ಗೆಮರ್ಯನು ಅರಸನಿಗೆ ಸುರುಳಿಯನ್ನು ಸುಡಬಾರದೆಂದು ವಿನಯದಿಂದ ವಿಜ್ಞಾಪನೆಮಾಡಿದರೂ ಅವನು ಕೇಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.