Jeremiah 36:26 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಙೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಙ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಘಚ್ಚಿಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
Kannada Bible (KNCL) BSI 2016
ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.