Jeremiah 36:28 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ಇನ್ನೊಂದು ಸುರುಳಿಯನ್ನು ತೆಗೆದುಕೊ. ಯೆಹೂದದ ರಾಜನಾದ ಯೆಹೋಯಾಕೀಮನು ಸುಟ್ಟುಹಾಕಿದ ಮೊದಲನೇ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಈ ಸುರುಳಿಯ ಮೇಲೆ ಬರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿಯಲ್ಲಿದ್ದ ಪೂರ್ವದ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.
Kannada Bible (KNCL) BSI 2016
“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.