Jeremiah 36:29 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;
Kannada Bible (KNCL) BSI 2016
ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.