Jeremiah 36:30 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.
Kannada Bible (KNCL) BSI 2016
ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.