Jeremiah 36:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಘಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
Kannada BSI Bible 2016
ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.
Kannada Bible (KNCL) BSI 2016
ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.