Jeremiah 36:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಘಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಘಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಘಹುದು. ಆ ಜನರ ಮೇಲೆ ತನಗೆ ಘಹಳ ಕೋಪಘಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.
Kannada BSI Bible 2016
ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪರೋಷಗಳು ಅಪಾರವಾಗಿವೆ ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”