Jeremiah 36:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.
Kannada BSI Bible 2016
ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರೀಯನ ಮಗನಾದ ಬಾರೂಕನು ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ವಿಧಿಸಿದಂತೆಯೇ ಮಾಡಿದನು.
Kannada Bible (KNCL) BSI 2016
ಪ್ರವಾದಿ ಯೆರೆಮೀಯನು ವಿಧಿಸಿದಂತೆಯೇ ನೇರೀಯನ ಮಗ ಬಾರೂಕನು ಸುರುಳಿಯಲ್ಲಿದ್ದ ಸರ್ವೇಶ್ವರನ ವಾಕ್ಯಗಳನ್ನು ಸರ್ವೇಶ್ವರನ ಆಲಯದೊಳಗೆ ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.