Jeremiah 36:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾಕೀಮನ ಆಳಿಬಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಘಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಐದನೆಯ ವರುಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇವಿುನವರೆಲ್ಲರೂ ಯೆಹೂದದ ಊರುಗಳಿಂದ ಯೆರೂಸಲೇವಿುಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.
Kannada Bible (KNCL) BSI 2016
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.