Jeremiah 37:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
Kannada BSI Bible 2016
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.
Kannada Bible (KNCL) BSI 2016
ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”