Jeremiah 37:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದು ನಿಜವಲ್ಲ, ಬಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನ್ನು ಬಂಧಿಸಿ ಜೆರುಸಲೇಮಿನ ರಾಜಾಊಕಾರಿಗಳ ಬಳಿಗೆ ಕರೆದೊಯ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
Kannada BSI Bible 2016
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆರೆಮೀಯನು - ಅದು ಸುಳ್ಳು, ನಾನು ಕಸ್ದೀಯರನ್ನು ಮರೆಹೊಗುವವನಲ್ಲ ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರತಂದನು.
Kannada Bible (KNCL) BSI 2016
ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಬಾಬಿಲೋನಿಯರನ್ನು ಮರೆಹೋಗುವವನಲ್ಲ,” ಎಂದನು. ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಬಂಧಿಸಿ, ಪದಾಧಿಕಾರಿಗಳ ಬಳಿಗೆ ಕರೆದುತಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.