Jeremiah 37:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಅಊಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಙೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
Kannada BSI Bible 2016
ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
Kannada Bible (KNCL) BSI 2016
ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.