Jeremiah 37:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
Kannada BSI Bible 2016
ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.
Kannada Bible (KNCL) BSI 2016
ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.