Jeremiah 37:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನ್ನು ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನ್ನ ವಿರುದ್ಧ ಅಥವಾ ನಿನ್ನ ಅಊಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನ್ನು ಮಾಡಿದ್ದೇನೆ? ನೀನು ನನ್ನನ್ನು ಸೆರೆಮನೆಯಲ್ಲಿ ಏಕೆ ಹಾಕಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
Kannada BSI Bible 2016
ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
Kannada Bible (KNCL) BSI 2016
ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?