Jeremiah 37:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನ್ನೂ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಾಗಲಿ ಅವನ ಸೇವಕರಾಗಲಿ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
Kannada Bible (KNCL) BSI 2016
ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.