Jeremiah 37:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
Kannada BSI Bible 2016
ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ ಎಂದು ಅರಿಕೆಮಾಡಿದನು.
Kannada Bible (KNCL) BSI 2016
ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.