Jeremiah 37:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಙೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಙೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
Kannada BSI Bible 2016
ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ದಿನವಹಿ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
Kannada Bible (KNCL) BSI 2016
ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.