Jeremiah 38:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಒಬ್ಬನ ಮೂಲಕ ಯೆಹೋವನ ಆಲಯದ ಮೂರನೇ ಪ್ರವೇಶದ್ವಾರಕ್ಕೆ ಕರೆಸಿದನು. ರಾಜನು ಅವನಿಗೆ, “ಯೆರೆಮೀಯನೇ, ನಾನು ನಿನಗೆ ಒಂದು ವಿಷಯವನ್ನು ಕೇಳಲಿದ್ದೇನೆ. ನನ್ನಿದ ಏನನ್ನೂ ಮುಚ್ಚಿಡಬೇಡ. ಎಲ್ಲವನ್ನು ಪ್ರಾಮಾಣಿಕವಾಗಿ ನನಗೆ ಹೇಳು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”
Kannada BSI Bible 2016
ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರತರಿಸಿ - ನಾನು ನಿನ್ನನ್ನು ಒಂದು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ ಎನ್ನಲು
Kannada Bible (KNCL) BSI 2016
ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.