Jeremiah 38:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಬಾಬಿಲೋನಿನ ಅಊಕಾರಿಗಳಿಗೆ ಶರಣಾಗತನಾಗಲು ಒಪ್ಪದ್ದಿದ್ದರೆ, ಜೆರುಸಲೇಮನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ಅವರು ಜೆರುಸಲೇಮನ್ನು ಸುಟ್ಟುಬಿಡುವರು ಮತ್ತು ನೀನು ಸಹ ಅವರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
Kannada BSI Bible 2016
ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಾಬೆಲಿನ ಅರಸನ ಸರದಾರರನ್ನು ಮರೆಹೊಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವದು. ಅವರು ಅದನ್ನು ಬೆಂಕಿಯಿಂದ ಸುಟ್ಟುಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ ಎಂದು ಹೇಳಿದನು.
Kannada Bible (KNCL) BSI 2016
ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.