Jeremiah 38:19 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಚಿದ್ಕೀಯನು, “ನಾನು ಈಗಾಗಲೇ ಬಾಬಿಲೋನಿನ ಸೈನ್ಯದ ಕಡೆಗೆ ಸೇರಿದ ಯೆಹೂದ್ಯರಿಗೆ ಹೆದರುತ್ತೇನೆ. ಆ ಸೈನಿಕರು ನನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸಿಕೊಡಘಹುದು ಮತ್ತು ಅವರು ನನಗೆ ಕೇಡುಮಾಡಘಹುದು; ನನ್ನನ್ನು ಹಿಂಸಿಸಘಹುದು ಎಂದು ಭಯವಾಗುತ್ತದೆ” ಎಂದು ಯೆರೆಮೀಯನಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು
Kannada Bible (KNCL) BSI 2016
ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.