Jeremiah 38:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಊಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬಂದುಕುವರು. ಅವರು ಜೀವಂತ ಉಳಿಯುವರು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
Kannada BSI Bible 2016
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರವಿುಸುವನು; ಅದು ಅವನ ಸೈನ್ಯದ ವಶವಾಗುವದು ಖಂಡಿತ ಎಂದು ಸಾರುತ್ತಿರುವಾಗ
Kannada Bible (KNCL) BSI 2016
ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.