Jeremiah 38:26 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಯ ನೆಲಮಾಳಿಗೆಯ ಕತ್ತಲು ಕೋಣೆಗೆ ನನ್ನನ್ನು ಮತ್ತೆ ಕಳುಹಿಸಙೇಡಿ, ಅಲ್ಲಿಗೆ ಹೋದರೆ ನಾನು ಸತ್ತುಹೋಗುವೆನೆಂದು ರಾಜನಿಗೆ ಪ್ರಾರ್ಥಿಸುತ್ತಿದ್ದೆ”‘ ಎಂದು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರಿಗೆ - ಯೆಹೋನಾಥಾನನ ಮನೆಗೆ ನನ್ನನ್ನು ತಿರಿಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು ಎಂಬದಾಗಿ ಹೇಳು ಎಂದು ಅಪ್ಪಣೆಕೊಟ್ಟನು.
Kannada Bible (KNCL) BSI 2016
ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”