Jeremiah 38:27 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾಜ್ಯಾಊಕಾರಿಗಳು ಅವನನ್ನು ಪ್ರಶಿಐಸುವದಕ್ಕಾಗಿ ಯೆರೆಮೀಯನಲ್ಲಿಗೆ ಘಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಊಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
Kannada Bible (KNCL) BSI 2016
ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.