Jeremiah 38:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಊನದಲ್ಲಿದ್ದಾನೆ. ನೀವು ಏನು ಙೇಕಾದರೂ ಮಾಡಿ” ಎಂದು ಆ ಅಊಕಾರಿಗಳಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.
Kannada BSI Bible 2016
ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು
Kannada Bible (KNCL) BSI 2016
ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.