Jeremiah 38:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಅಊಕಾರಿಗಳು ಯೆರೆಮೀಯನನ್ನು ಹಿಡಿದು ಮಲ್ಕೀಯನ ಬಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಬಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಊಕಾರಿಗಳು ಹಗ್ಗಗಳನ್ನು ಕಟ್ಟಿ ಯೆರೆಮೀಯನನ್ನು ಬಾವಿಯಲ್ಲಿ ಇಳಿಬಿಟ್ಟರು. ಆ ಬಾವಿಯಲ್ಲಿ ಸಬಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
Kannada BSI Bible 2016
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.
Kannada Bible (KNCL) BSI 2016
ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.