Jeremiah 39:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಊಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಙೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
Kannada BSI Bible 2016
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.
Kannada Bible (KNCL) BSI 2016
ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.