Jeremiah 39:18 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬಂದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ”‘ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳಕೊಂಡು ಹೋಗುವಿ; ಇದು ಯೆಹೋವನ ನುಡಿ.
Kannada Bible (KNCL) BSI 2016
ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.