Jeremiah 39:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಊಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
Kannada BSI Bible 2016
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಚಿದ್ಕೀಯನೂ ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನಮಾಡಿದರು.
Kannada Bible (KNCL) BSI 2016
ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.