Jeremiah 39:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಘೂಕದೆಐಚ್ಚರನು ಹಮಾತ್ ಸೀಮೆಯ ‘ರಿಘ್ಲ’ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಘೂಕದೆಐಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
Kannada BSI Bible 2016
ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ತಗಲಿ ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು; ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ
Kannada Bible (KNCL) BSI 2016
ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.