Jeremiah 39:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನೆಂಘವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಘೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
Kannada BSI Bible 2016
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ತನ್ನನ್ನು ಮರೆಹೊಕ್ಕವರನ್ನೂ ಇತರ ಸಮಸ್ತ ಜನರನ್ನೂ ಬಾಬೆಲಿಗೆ ಸೆರೆಯೊಯ್ದನು.
Kannada Bible (KNCL) BSI 2016
ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.