Jeremiah 4:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಯೆಹೋವನ ಸಂದೇಶ: ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿದ ದೂರಸರಿದು ಅಲೆದಾಡಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.
Kannada BSI Bible 2016
ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ ನೀನು ಇನ್ನು ದಿಕ್ಕಾಪಾಲಾಗಿರುವದಿಲ್ಲ;
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.