Jeremiah 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆರೆಮೀಯನೆಂಘ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಎಂದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
Kannada BSI Bible 2016
ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.
Kannada Bible (KNCL) BSI 2016
ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.