Jeremiah 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
Kannada BSI Bible 2016
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಈ ಜನರಿಗೂ ಯೆರೂಸಲೇವಿುಗೂ ಈ ಮಾತಾಗುವದು - ಬಿಸಿಗಾಳಿಯು ಅರಣ್ಯದ ಬೋಳು ಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವದಕ್ಕೂ ಶೋಧಿಸುವದಕ್ಕೂ ಆಗದು.
Kannada Bible (KNCL) BSI 2016
ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.