Jeremiah 4:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
Kannada BSI Bible 2016
ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!
Kannada Bible (KNCL) BSI 2016
ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ! ಅವನ ಕುದುರೆಗಳು ರಣಹದ್ದುಗಳಂತೆ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.