Jeremiah 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
Kannada BSI Bible 2016
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
Kannada Bible (KNCL) BSI 2016
ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.